1 Kings 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಸ್ನೇಹಿತರಾದ ಯುವಕರು, “ಆ ಜನರು ನಿನ್ನ ಬಳಿಗೆ ಬಂದು, ‘ನಿನ್ನ ತಂದೆಯು ಬಲಾತ್ಕರಿಸಿ ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಿಸಿದನು. ಈಗ ನಮ್ಮ ಕೆಲಸವನ್ನು ಸುಲಭಗೊಳಿಸು’ ಎಂದು ಹೇಳಿದರು. ಆದ್ದರಿಂದ ನೀನು ಜಂಬದಿಂದ ಅವರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ಪೂರ್ಣದೇಹಕ್ಕಿಂತ ಶಕ್ತಿಯುಳ್ಳದ್ದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
Kannada BSI Bible 2016
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
Kannada Bible (KNCL) BSI 2016
ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರ ಮಾಡು ಎಂದು ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಈ ಕಿರಿಬೆರಳು ದಪ್ಪ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.