1 Kings 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಚಾವಟಿಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ’ ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
Kannada BSI Bible 2016
ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು,’ ಎಂಬುದಾಗಿ ಹೇಳಬೇಕು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.