1 Kings 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
Kannada BSI Bible 2016
ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.
Kannada Bible (KNCL) BSI 2016
“ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.