1 Kings 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
Kannada BSI Bible 2016
ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
Kannada Bible (KNCL) BSI 2016
ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.