1 Kings 12:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೋರಾಮನೆಂಬ ಹೆಸರಿನ ಮನುಷ್ಯನು ಕೆಲಸಗಾರರ ಮೇಲ್ವಿಚಾರಕನಾಗಿದ್ದನು. ರಾಜನಾದ ರೆಹಬ್ಬಾಮನು ಜನರೊಂದಿಗೆ ಮಾತನಾಡಲು ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರೇಲಿನ ಜನರು ಅವನು ಸಾಯುವವರೆಗೆ ಅವನ ಕಡೆಗೆ ಕಲ್ಲುಗಳನ್ನು ಎಸೆದರು. ಆಗ ರೆಹಬ್ಬಾಮನು ತನ್ನ ರಥವನ್ನು ಹತ್ತಿ ತಪ್ಪಿಸಿಕೊಂಡು, ಜೆರುಸಲೇಮಿಗೆ ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
Kannada BSI Bible 2016
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲ್ಯರ ಬಳಿಗೆ ಕಳುಹಿಸಲು ಅವರು ಇವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೇ ರಥವನ್ನೇರಿ ಯೆರೂಸಲೇವಿುಗೆ ಓಡಿ ಹೋದನು.
Kannada Bible (KNCL) BSI 2016
ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸ ರೆಹಬ್ಬಾಮನು ಬೇಗನೇ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.