1 Kings 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
Kannada BSI Bible 2016
ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲ್ಯರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರಿಸಿ ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
Kannada Bible (KNCL) BSI 2016
ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.