1 Kings 12:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
Kannada BSI Bible 2016
ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.
Kannada Bible (KNCL) BSI 2016
ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.