1 Kings 12:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
Kannada BSI Bible 2016
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;
Kannada Bible (KNCL) BSI 2016
ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.