1 Kings 12:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
Kannada BSI Bible 2016
ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.
Kannada Bible (KNCL) BSI 2016
ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.