1 Kings 12:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
Kannada BSI Bible 2016
ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.
Kannada Bible (KNCL) BSI 2016
ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.