1 Kings 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
Kannada BSI Bible 2016
ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು; ನಿನ್ನ ತಂದೆಯು ನೇವಿುಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವದಾದರೆ ನಾವು ನಿನ್ನನ್ನು ಸೇವಿಸುವೆವು ಎಂದು ಹೇಳಲು ಅವನು -
Kannada Bible (KNCL) BSI 2016
“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.