1 Kings 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನ ಕಾಲದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಿದ್ದ ಕೆಲವು ಹಿರಿಯರು ಅಲ್ಲಿದ್ದರು. ರಾಜನಾದ ರೆಹಬ್ಬಾಮನು ಅವರಿಗೆ, “ನಾನು ಈ ಜನರಿಗೆ ಉತ್ತರ ಹೇಳಲೇಬೇಕು. ನಾನು ಏನು ಹೇಳಲಿ? ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
Kannada BSI Bible 2016
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
Kannada Bible (KNCL) BSI 2016
ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.