1 Kings 12:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಜನರು, ‘ನಿನ್ನ ತಂದೆ ಕೊಟ್ಟ ಕೆಲಸಕ್ಕಿಂತಲೂ ಸುಲಭವಾದ ಕೆಲಸವನ್ನು ನಮಗೆ ಕೊಡು’ ಎಂದು ಕೇಳುತ್ತಿದ್ದಾರೆ. ಈ ಜನರಿಗೆ ನಾನು ಉತ್ತರವನ್ನು ಹೇಳಲೇಬೇಕು. ಈ ವಿಷಯದಲ್ಲಿ ನಿಮ್ಮ ಆಲೋಚನೆಯೇನು? ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
Kannada BSI Bible 2016
ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು
Kannada Bible (KNCL) BSI 2016
ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.