1 Kings 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.
Kannada BSI Bible 2016
ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತೇಲಿನಲ್ಲಿ ಒಬ್ಬ ಮುದುಕನಾದ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿವಸ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಅಂದದ್ದನ್ನೂ ತಂದೆಗೆ ತಿಳಿಸಿದರು.
Kannada Bible (KNCL) BSI 2016
ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.