1 Kings 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
Kannada BSI Bible 2016
ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಾವೃಕ್ಷದ ಕೆಳಗೆ ಕೂತಿರುವ ಅವನನ್ನು ಕಂಡು - ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ ಎಂದು ಕೇಳಿದನು;
Kannada Bible (KNCL) BSI 2016
ಆ ದೈವಭಕ್ತನ ಹಿಂದೆಯೇ ಹೋಗಿ ಏಲಾವೃಕ್ಷದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ಜುದೇಯದಿಂದ ಬಂದ ದೈವಭಕ್ತನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. ಅದಕ್ಕವನು, “ನಾನೇ,” ಎಂದನು.