1 Kings 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ ‘ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
Kannada BSI Bible 2016
ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.
Kannada Bible (KNCL) BSI 2016
ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.