1 Kings 13:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.
Kannada BSI Bible 2016
ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ನಪಾನಗಳನ್ನು ತೆಗೆದುಕೊಳ್ಳುವದಕ್ಕೋಸ್ಕರ ಹಿಂದಿರುಗಿ ಬಂದದರಿಂದ ನಿನ್ನ ಶವವು ನಿನ್ನ ಕುಟುಂಬ ಶ್ಮಶಾನಭೂವಿುಯನ್ನು ಸೇರುವದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ ಅಂದನು.
Kannada Bible (KNCL) BSI 2016
ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.