1 Kings 13:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.
Kannada BSI Bible 2016
ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ
Kannada Bible (KNCL) BSI 2016
ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.