1 Kings 13:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.
Kannada BSI Bible 2016
ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಊರಿಗೆ ತೆಗೆದುಕೊಂಡು ಬಂದು ತನ್ನ ಶ್ಮಶಾನಭೂವಿುಯಲ್ಲಿ ಅದನ್ನು ಸಮಾಧಿ ಮಾಡಿದನು. ಅವರು - ಅಯ್ಯೋ, ನನ್ನ ಸಹೋದರನೇ, ಎಂದು ಗೋಳಾಡಿದರು.
Kannada Bible (KNCL) BSI 2016
ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು.