1 Kings 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.
Kannada BSI Bible 2016
ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರೋಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರೋಧವಾಗಿಯೂ ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು ಅಂದನು.
Kannada Bible (KNCL) BSI 2016
ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.