1 Kings 13:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
Kannada BSI Bible 2016
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
Kannada Bible (KNCL) BSI 2016
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.