1 Kings 13:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
Kannada BSI Bible 2016
ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
Kannada Bible (KNCL) BSI 2016
ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.