1 Kings 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.
Kannada BSI Bible 2016
ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನಿಗೆ - ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಬಲಹೊಂದು; ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ ಅನ್ನಲು
Kannada Bible (KNCL) BSI 2016
ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು.