1 Kings 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
Kannada BSI Bible 2016
ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮನುಷ್ಯನು ಅರಸನಿಗೆ - ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ ನಾನು ನಿನ್ನ ಸಂಗಡ ಬರುವದಿಲ್ಲ; ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲ.
Kannada Bible (KNCL) BSI 2016
ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.