1 Kings 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಸಗಣಿಯನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
Kannada BSI Bible 2016
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು; ಅವರು ನಿರ್ನಾಮವಾಗುವರು.
Kannada Bible (KNCL) BSI 2016
ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.