1 Kings 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
Kannada BSI Bible 2016
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.
Kannada Bible (KNCL) BSI 2016
ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.