1 Kings 14:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
Kannada BSI Bible 2016
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.