1 Kings 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
Kannada BSI Bible 2016
ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
Kannada Bible (KNCL) BSI 2016
ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.