1 Kings 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.
Kannada BSI Bible 2016
ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನನುಸರಿಸುತ್ತಿರುವ ದೇವದಾಸ ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ನಡಿಸುವವರಾದರು.
Kannada Bible (KNCL) BSI 2016
ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.