1 Kings 14:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
Kannada BSI Bible 2016
ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
Kannada Bible (KNCL) BSI 2016
ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.