1 Kings 14:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾಕೊಠಡಿಯ ಗೋಡೆಯ ಮೇಲೆ ಈ ಗುರಾಣಿಗಳನ್ನು ಇಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
Kannada BSI Bible 2016
ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು; ಅಲ್ಲಿಂದ ತಿರಿಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
Kannada Bible (KNCL) BSI 2016
ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಆ ಗುರಾಣಿಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.