1 Kings 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.
Kannada BSI Bible 2016
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.
Kannada Bible (KNCL) BSI 2016
ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಸಮಾಧಿಮಾಡಿದರು. ಅವನ ತಾಯಿ ಅಮ್ಮೋನಿಯಳಾದ ನಯಮಾ. ಅವನ ಮಗ ಅಬಿಯಾಮನು ಅವನಿಗೆ ಬದಲಾಗಿ ಅರಸನಾದನು.