1 Kings 14:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
Kannada BSI Bible 2016
ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.
Kannada Bible (KNCL) BSI 2016
ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು.