1 Kings 14:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
Kannada BSI Bible 2016
ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
Kannada Bible (KNCL) BSI 2016
ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.