1 Kings 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.
Kannada BSI Bible 2016
ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.
Kannada Bible (KNCL) BSI 2016
ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.