1 Kings 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
Kannada BSI Bible 2016
ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.
Kannada Bible (KNCL) BSI 2016
ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.