1 Kings 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
Kannada BSI Bible 2016
ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
Kannada Bible (KNCL) BSI 2016
ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.