1 Kings 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.
Kannada BSI Bible 2016
ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು.
Kannada Bible (KNCL) BSI 2016
ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.