1 Kings 15:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
Kannada BSI Bible 2016
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.
Kannada Bible (KNCL) BSI 2016
ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.