1 Kings 15:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
Kannada BSI Bible 2016
ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
Kannada Bible (KNCL) BSI 2016
ಅವನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.