1 Kings 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದ್ವಾನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದ್ವಾನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದ್ವಾನನ್ನು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.
Kannada BSI Bible 2016
ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು.
Kannada Bible (KNCL) BSI 2016
ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.