1 Kings 15:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada BSI Bible 2016
ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada Bible (KNCL) BSI 2016
ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.