1 Kings 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.
Kannada BSI Bible 2016
ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಯನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರನಾಗಿ ನಡೆದ ದಾವೀದನ ನಿವಿುತ್ತವಾಗಿ ಯೆಹೋವನು ಯೆರೂಸಲೇವಿುನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.
Kannada Bible (KNCL) BSI 2016
ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.