1 Kings 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
Kannada BSI Bible 2016
ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಿಮ್ರಿಯು ಅಲ್ಲಿಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ನಡೆಯಿತು.
Kannada Bible (KNCL) BSI 2016
ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.