1 Kings 16:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
Kannada BSI Bible 2016
ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
Kannada Bible (KNCL) BSI 2016
ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.