1 Kings 16:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.
Kannada BSI Bible 2016
ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನಿಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಸಾಯಲಾಗಿ ಒಮ್ರಿಯೇ ಆಳುವವನಾದನು.
Kannada Bible (KNCL) BSI 2016
ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು.