1 Kings 16:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
Kannada BSI Bible 2016
ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೊಂದನೆಯ ವರುಷದಲ್ಲಿ ಒಮ್ರಿಯು ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. ಆರು ವರುಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
Kannada Bible (KNCL) BSI 2016
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು.