1 Kings 16:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
Kannada BSI Bible 2016
ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.
Kannada Bible (KNCL) BSI 2016
ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.