1 Kings 16:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
Kannada BSI Bible 2016
ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.
Kannada Bible (KNCL) BSI 2016
ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.