1 Kings 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
Kannada BSI Bible 2016
ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನ್ನ ಮನೆಗೂ ಆಗುವದು.
Kannada Bible (KNCL) BSI 2016
ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.